(ನ್ಯೂಸ್ ಕಡಬ) newskadaba.com. ನಾಸಿಕ್, ಮಾ 06. ಈರುಳ್ಳಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ರೈತರೊಬ್ಬರು ಸರ್ಕಾರದ ನೀತಿಗಳನ್ನು ವಿರೋಧಿಸಿ ಈರುಳ್ಳಿ ಬೆಳೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಸಿಕ್‌ನ ಏಷ್ಯಾದ ಅತಿದೊಡ್ಡ ಸಗಟು ಈರುಳ್ಳಿ ಮಾರುಕಟ್ಟೆಯಾದ ಲಾಸಲ್‌ಗಾಂವ್‌ನಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ)ಯಲ್ಲಿ ಈರುಳ್ಳಿ ಬೆಲೆ ತೀವ್ರವಾಗಿ ಕುಸಿದಿದ್ದು, ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.