ನಾಳೆ (ಮಾ.07): ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಕಡಬಕ್ಕೆ ಆಗಮನ

(ನ್ಯೂಸ್ ಕಡಬ) newskadaba.com ಕಡಬ, ಮಾ. 06. ಕರ್ನಾಟಕ ಉನ್ನತ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಶ್ವಥ್ ನಾರಾಯಣ ಸಿ.ಎನ್. ಅವರು ಮಾ. 07ರ ಮಂಗಳವಾರದಂದು ದ.ಕ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಮಂಗಳವಾರ ಬೆಳಗ್ಗೆ 8 ಗಂಟೆಗೆ ಕೈಕಂಬದ ಬಿಳಿನೆಲೆ ಗ್ರಾಮದ ಗೋಪಾಲಕೃಷ್ಣ ಪ್ರೌಢಶಾಲೆಯ ಮೈದಾನಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸುವ ಇವರು, 8.05ಕ್ಕೆ ಬಿಳಿನೆಲೆ ಗ್ರಾಮದಿಂದ ನಿರ್ಗಮಿಸಿ 8.15ಕ್ಕೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವರು. ಮಧ್ಯಾಹ್ನ 1.15ಕ್ಕೆ ಕೈಕಂಬದಲ್ಲಿರುವ ಗೋಪಾಲಕೃಷ್ಣ ಪ್ರೌಢಶಾಲಾ ಮೈದಾನದಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕಡಬ: ಸೈಂಟ್ ಜೋಕಿಮ್ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ

error: Content is protected !!
Scroll to Top