2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿಯಲ್ಲಿ ಬಂಧನ

(ನ್ಯೂಸ್ ಕಡಬ) newskadaba.con ನೆಲ್ಯಾಡಿ, ಮಾ. 07. ಬೆಳ್ತಂಗಡಿ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ 2 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಠಾಣಾ ಪೊಲೀಸರು ನೆಲ್ಯಾಡಿ ಬಸ್‌ ನಿಲ್ದಾಣದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ವರದಿಯಾಗಿದೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ವಾಲಾಡಿ ನಿವಾಸಿ ಸೋನು ಜೋಯಿ(32) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಲ್ಲಿ ಸಿ.ಸಿ 445/2016 ಕಲಂ: 143,147,148, 504,506,447,427 ಜೊತೆಗೆ 149 IPC ಪ್ರಕರಣ ದಾಖಲಾಗಿತ್ತು. ಈತನ ವಿರುದ್ಧ ವಾರಂಟ್ ಜಾರಿಗೊಳಿಸಲಾಗಿತ್ತು. ಆದರೆ ಈತ 2 ವರ್ಷದಿಂದ ತಲೆಮರೆಸಿಕೊಂಡಿದ್ದನು. ಈತನ ಬಂಧನ ಕಾರ್ಯಾಚರಣೆಯನ್ನು ನಡೆಸಿದ ಧರ್ಮಸ್ಥಳ ಪೊಲೀಸರು ಸೋಮವಾರದಂದು ಕಡಬ ತಾಲೂಕಿನ ನೆಲ್ಯಾಡಿ ಬಸ್ ತಂಗುದಾಣದಲ್ಲಿ ದಸ್ತಗಿರಿ ಮಾಡಿದ್ದಾರೆ. ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಹಾಗೂ ಧರ್ಮಸ್ಥಳ ಠಾಣೆ ಉಪನಿರೀಕ್ಷಕ ಅನಿಲ್‌ಕುಮಾರ್ ಡಿ. ರವರ ಮಾರ್ಗದರ್ಶನದಂತೆ ಧರ್ಮಸ್ಥಳ ಠಾಣಾ ಹೆಡ್‌ಕಾನ್ಸ್‌ಸ್ಟೇಬಲ್‌ಗಳಾದ ರಾಜೇಶ್, ಮಂಜುನಾಥ್ ಹಾಗೂ ಕಾನ್‌ಸ್ಟೇಬಲ್ ಮಲ್ಲಿಕಾರ್ಜುನರವರು ನೆಲ್ಯಾಡಿಯಲ್ಲಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Also Read  ಕಡಬ ಸೈಂಟ್ ಆ್ಯನ್ಸ್‌ ಮುಖ್ಯೋಪಾಧ್ಯಾಯರಿಂದ ದಬ್ಬಾಳಿಕೆ ಆರೋಪ ► ಇಂದು ಸಂಜೆಯೊಳಗೆ ಸಮಸ್ಯೆ ಬಗೆಹರಿಯದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

error: Content is protected !!
Scroll to Top