ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆಯಲು ಯತ್ನ ➤ ವ್ಯಕ್ತಿಯ ಬಂಧನ

(ನ್ಯೂಸ್ ಕಡಬ) newskadaba.com ವಾಶಿಂಗ್ಟನ್, ಮಾ. 07. ಲಾಸ್ ಏಂಜಲೀಸ್ ನಿಂದ ಬೋಸ್ಟನ್ ಗೆ ಪ್ರಯಾಣಿಸುತ್ತಿದ್ದ ಯುನೈಟೆಡ್ ಏರ್ ಲೈನ್ಸ್ ವಿಮಾನದಲ್ಲಿ ಪ್ರಯಾಣಿಕನೋರ್ವ ತುರ್ತು ನಿರ್ಗಮನದ ಬಾಗಿಲು ತೆರೆಯಲು ಪ್ರಯತ್ನಿಸಿದ್ದು, ಇದನ್ನು ತಡೆಯಲು ಹೋದ ಗಗನ ಸಖಿಯ ಕುತ್ತಿಗೆಗೆ ಇರಿಯಲು ಯತ್ನಿಸಿರುವ ಘಟನೆ ವರದಿಯಾಗಿದೆ.

ಘಟನೆಗೆ ಸಂಬಂಧಿಸಿ ಆರೋಪಿ ಲಿಯೋ ಮಿನ್ ಸ್ಟರ್ ನ ಫ್ರಾನ್ಸಿಸ್ಕೊ ಟೊರೆಸ್ ಎಂಬಾತನನ್ನು ಬೋಸ್ಟನ್ ಲೋಗನ್ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಟೊರೆಸ್ ನನ್ನು ಬೋಸ್ಟನ್ ಲೋಗನ್ ಅಂತರ್ ರಾಷ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮಾ. 09ರಂದು ವಿಚಾರಣೆ ನಡೆಯಲಿದ್ದು, ಅಲ್ಲಿಯ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಇಲಾಖೆಯ ಪ್ರಕಟನೆ ತಿಳಿಸಿದೆ.

Also Read  ಈ 8 ರಾಶಿಯವರಿಗೆ ಮದುವೆ ಯೋಗ ವ್ಯಾಪಾರ ದಾಂಪತ್ಯದಲ್ಲಿ ಹೊಂದಾಣಿಕೆ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಪಡೆದುಕೊಳ್ಳಿ

error: Content is protected !!
Scroll to Top