ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ…!        ➤  ಅರ್ಜಿ ಸಲ್ಲಿಕೆ ಅವಧಿ ಮಾ.15ರ ವರೆಗೆ ವಿಸ್ತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.07. ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ವಿವಿಧ ಕೋರ್ಸ್‌ಗಳನ್ನು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ.

ವಿವಿಧ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಮಾತ್ರ ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್‌ 15, ಕೊನೆಯ ದಿನವಾಗಿರುತ್ತದೆ.

Also Read  MRPL ನೇಮಕಾತಿಯಲ್ಲಿ ಸ್ಥಳೀಯರಿಗೆ ಅನ್ಯಾಯ ➤ ಪ್ರತಿಭಟನೆ ನಡೆಸಿ ಆಕ್ರೋಶ

 

error: Content is protected !!
Scroll to Top