ಹೋಳಿ ಮೆರವಣಿಗೆ ಹಿನ್ನೆಲೆ ➤ ಮಾ. 08 ರಂದು ಮದ್ಯ ಮಾರಾಟ ನಿಷೇಧ

(ನ್ಯೂಸ್ ಕಡಬ) newskadaba.com ಕುಂದಾಪುರ, ಮಾ. 07. ಹೋಳಿ ಹಬ್ಬ ಆಚರಣೆಯ ಪ್ರಯುಕ್ತ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಳ್ಳಿ, ಗುಜ್ಜಾಡಿ ಹಾಗೂ ತ್ರಾಸಿ ಗ್ರಾಮಗಳಲ್ಲಿ ಮಾರ್ಚ್ 8ರಂದು ಬೆಳಗ್ಗೆ 6ರಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.

ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಂಕಣ ಖಾರ್ವಿ ಸಮಾಜದವರು ಹೋಳಿ ಹಬ್ಬ ಆಚರಣೆಯ ಪ್ರಯುಕ್ತ ಮೆರವಣಿಗೆ ನಡೆಸಲಿದ್ದು, ಈ ಸಂದರ್ಭ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಗಂಗೊಳ್ಳಿ, ಗುಜ್ಜಾಡಿ ಹಾಗೂ ತ್ರಾಸಿ ಗ್ರಾಮಗಳಲ್ಲಿ ಬಾರ್, ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳಲ್ಲಿ ಮದ್ಯ ಮಾರಾಟ ಮಾಡುವುದನ್ನು ಮಾರ್ಚ್ 8ರ ಬೆಳಗ್ಗೆ 6ರಿಂದ ರಾತ್ರಿ 12 ಗಂಟೆಯವರೆಗೆ ಮುಚ್ಚಲು ಆದೇಶಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.

Also Read  ಮಂಗಳೂರು: ನಿಲ್ಲಿಸಿದ್ದ ತ್ಯಾಜ್ಯ ವಿಲೇವಾರಿಯ ಲಾರಿ ಹಠಾತ್ ಚಲಿಸಿ ಬೈಕ್, ಕಾರು ಹಾಗೂ ಟೆಂಪೋಗೆ ಢಿಕ್ಕಿ

error: Content is protected !!
Scroll to Top