ವಿಮಾನದ ಟಾಯ್ಲೆಟ್‌ನಲ್ಲಿ 1.42 ಕೋಟಿ ರೂ. ಮೌಲ್ಯದ ಚಿನ್ನ ಪತ್ತೆ

(ನ್ಯೂಸ್ ಕಡಬ)newskadaba.com  ಕಣ್ಣೂರು, ಮಾ.07. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಮಾನದ ಟಾಯ್ಲೆಟ್‌ನಲ್ಲಿ ಭಾರೀ ಮೌಲ್ಯದ ಚಿನ್ನವನ್ನು ಡಿಆರ್‌ಐ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ಅಬುಧಾಬಿಯಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ‘ಗೋ ಫಸ್ಟ್ ವಿಮಾನದ ಟಾಯ್ಲೆಟ್‌ನಲ್ಲಿ 2,536 ಗ್ರಾಂ ಚಿನ್ನ ಪತ್ತೆಯಾಗಿದೆ. ಸುಮಾರು 1.42 ಕೋಟಿ ರೂ. ಬೆಲೆಬಾಳುವ ಚಿನ್ನವನ್ನು ಕಪ್ಪು ಬಟ್ಟೆಯಿಂದ ಸುತ್ತಲಾಗಿತ್ತು. ರಹಸ್ಯ ಮಾಹಿತಿ ಆಧರಿಸಿ ಡಿಆರ್‌ಐ ಕೊಚ್ಚಿ ಘಟಕ ನಡೆಸಿದ ತಪಾಸಣೆಯಲ್ಲಿ ಚಿನ್ನ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

Also Read  ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಗಮನಿಸಿ.!➤ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ  

ಚಿನ್ನ ಕಳ್ಳಸಾಗಣೆ ಮಾಡಿದವರ ಪತ್ತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

error: Content is protected !!
Scroll to Top