AC ಸ್ಫೋಟಗೊಂಡು ತಾಯಿ, ಇಬ್ಬರು ಮಕ್ಕಳು ಮೃತ್ಯು

(ನ್ಯೂಸ್ ಕಡಬ)newskadaba.com ರಾಯಚೂರು, ಮಾ.07. ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಫೋಟಗೊಂಡ ಹಿನ್ನೆಲೆ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಶಕ್ತಿ ನಗರದಲ್ಲಿ ನಡೆದಿದೆ.


ತಾಯಿ ರಂಜಿತಾ(33), ಮಕ್ಕಳಾದ ಮೃದಲ್(13), ತಾರುಣ್ಯ(5) ಮೃತರಾಗಿದ್ದು, ಮೂಲತಃ ಮಂಡ್ಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಸಿದ್ದಲಿಂಗಯ್ಯ ಸ್ವಾಮಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ಶಕ್ತಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top