ಮಾ.8ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿ       ➤  ಆರೋಗ್ಯ ಇಲಾಖೆ NHM ನೌಕರರ ಖಾಯಂಗೆ ಸಿಎಂ ಬೊಮ್ಮಾಯಿ ನಿರ್ಧಾರ ?

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.07. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 8 ರಂದು ರಾಜ್ಯ ಸಚಿವ ಸಂಪುಟ ಸಭೆಗೆ ದಿನಾಂಕ ನಿಗದಿ ಪಡಿಸಲಾಗಿದೆ.

ಅಂದು ಕಳೆದ ಕೆಲ ದಿನಗಳಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವಂತ ರಾಜ್ಯ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರನ್ನು ಖಾಯಂ ಗೊಳಿಸೋ ನಿರ್ಧಾರದ ಬಗ್ಗೆ ಪ್ರಸ್ತಾಪಸಿಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಕಳೆದ 21 ದಿನಗಳಿಂದ ರಾಜ್ಯ ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕೆಲಸ ಮಾಡುತ್ತಿರುವಂತ ಒಳಗುತ್ತಿಗೆ ನೌಕರರು ನಗರದ ಫ್ರೀಡಂ ಪಾರ್ಕ್ ನಲ್ಲಿ ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸುತ್ತಿದ್ದಾರೆ. ತಮ್ಮ ನ್ನು ಖಾಯಂಗೊಳಿಸಬೇಕು ಎಂಬುದಾಗಿ ಒತ್ತಾಯಿಸಿ ನಡೆಸಲಾಗುತ್ತಿರುವಂತ ಪ್ರತಿಭಟನೆ ಇನ್ನೂ ಮುಂದುವರೆದಿದೆ.

Also Read  ಸೀರೆ ಹಂಚಲು ಬಂದಿದ್ದ ಶಾಸಕರ ಬೆಂಬಲಿಗರನ್ನು ತರಾಟೆಗೆ ತೆಗೆದುಕೊಂಡ ಜನರು

 

 

error: Content is protected !!
Scroll to Top