ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್‌ ನಡುವೆ ಅಪಘಾತ   ➤  ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com  ಪಡುಬಿದ್ರಿ, ಮಾ.07. ಮೂಲ್ಕಿ ಸೇತುವೆ ಮೇಲೆ ಟ್ಯಾಂಕರ್ – ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ, ದಂಪತಿ ಅಕ್ಬರ್ ಪಾಶ(61) ಹಾಗೂ ಖತೀಜಾಬಿ(46) ಎಂದು ಗುರುತಿಸಲಾಗಿದೆ. ದಂಪತಿ ಮಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ತಮಗಾಗಿ ಪಾಸ್ ಪೋರ್ಟ್ ಮಾಡಿಸಲೆಂದು ಹೊರಟಿದ್ದರು ಎಂದು ತಿಳಿದುಬಂದಿದೆ.

 

Scroll to Top