ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ   ➤  ವಿದ್ಯಾರ್ಥಿಗಳು ಈ ವಿಷಯಗಳನ್ನ ಗಮನಿಸಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಎಂದರೆ ಮಾರ್ಚ್‌ 9ರಿಂದ ಆರಂಭವಾಗಲಿದೆ. ಸುಸೂತ್ರವಾಗಿ ಪರೀಕ್ಷೆಗಳನ್ನು ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ಮಾಡಿಕೊಂಡಿದೆ.

ಇನ್ನೂ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಲವು ನಿಯಮ ಪಾಲನೆ ಮಾಡುವಂತೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳು ಕೊಠಡಿ ಮೇಲ್ವೆಚಾರ ಸಿಬ್ಬಂದಿಗಳು ಮೊಬೈಲ್ ಫೋನ್/ಇತರೆ ವಿದ್ಯುನ್ಮಾನ ಆಧುನಿಕ ಉಪಕರಣಗಳ ಬಳಕೆ ನಿಷೇಧಿಸಿದೆ ಎಂದು ವರದಿ ತಿಳಿಸಿದೆ.  ಕೊಠಡಿ ಒಳಗೆ ಯಾರೂ ವಿದ್ಯುನ್ಮಾನ ಉಪಕರಣಗಳನ್ನು ತಗೆದುಕೊಂಡು ಹೋಗುವಂತಿಲ್ಲ ಹಾಗೂ ಪರೀಕ್ಷಾ ಕೇಂದ್ರ ಆವರಣದಲ್ಲಿ ಅನಾವಶ್ಯಕ ಓಡಾಟ ಪರೀಕ್ಷೆ ಕಾರ್ಯಕ್ಕೆ ಸಂಬಂಧಿಸದೆ ಇರುವ ವ್ಯಕ್ತಿಗಳ ಪ್ರವೇಶಕ್ಕೆ ನಿಷೇಧವಿದೆ.

Also Read  ನಾಪತ್ತೆಯಾಗಿದ್ದ ಪೆರುವಾಯಿಯ ಯುವತಿ ಬೆಂಗಳೂರಿನಲ್ಲಿ ಪತ್ತೆ

ಇನ್ನು ಈ ಬಾರಿ 7,27,387 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆ ನಡೆಯುವ ರಾಜ್ಯದ 1,109 ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಹಿಂದೆ ನಕಲು ಮಾಡಿದ್ದ ಪರೀಕ್ಷಾ ಕೇಂದ್ರಗಳಲ್ಲಿ ಕಣ್ಗಾವಲು ಇರಿಸಲಾಗಿದೆ.

 

 

 

error: Content is protected !!
Scroll to Top