ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ➤ ಕೊಲೆಯಲ್ಲಿ ಅಂತ್ಯ..!

Death, deadbody, Waterfall

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 08. ತಟ್ಟೆ ತೊಳೆಯುವ ವಿಚಾರದಲ್ಲಿ ನಡೆದ ಗಲಾಟೆ ತಾರಕಕ್ಕೇರಿ ಬಳಿಕ ಅದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮರವೂರು ಗ್ರಾಮದ ಪೋಸ್ಟಲ್ ಗಾರ್ಡ್ ಸೈಟ್ ನಡೆದಿದೆ.

ಕೊಲೆಯಾದವರನ್ನು ಕೂಲಿ ಕಾರ್ಮಿಕ, ಉತ್ತರ ಭಾರತ ಮೂಲದ ಸಂಜಯ್ ಎಂದು ಗುರುತಿಸಲಾಗಿದೆ. ಸಂಜಯ್ ಮತ್ತು ಸೋಹಾನ್ ಯಾದವ್ ಎಂಬವರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಸೋಹನ್ ಯಾದವ್ ಸಂಜಯ್‌ ನನ್ನು ಬಲವಾಗಿ ಹಿಂದಕ್ಕೆ ತಳ್ಳಿದ್ದ. ಕೆಳಗೆ ಬಿದ್ದ ಸಂಜಯ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಆತ ಮೃತಪಟ್ಟಿದ್ದ ಎನ್ನಲಾಗಿದೆ.

Scroll to Top