ದ್ವಿತೀಯ ಪಿಯುಸಿ ಪರೀಕ್ಷಾ ವಿದ್ಯಾರ್ಥಿಗಳಿಗೆ ಸೂಚನೆ       ➤ ಈ ನಿಯಮ ಪಾಲನೆ ಕಡ್ಡಾಯ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. ಮಾ. 09 ರ ನಾಳೆಯಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಈ ಪರೀಕ್ಷೆಗೆ ಹಿಜಾಬ್ ಸೇರಿದಂತೆ ಯಾವುದೇ ಧರ್ಮಧಾರಿತ ಉಡುಪು ಧರಿಸಿ ಬಂದರೆ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ನಾಳೆಯಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ ಸಿದ್ಧತೆ ಕೈಗೊಂಡಿದೆ. 1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 7,26,213 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಹೊಸದಾಗಿ 6.29 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 25,847 ಖಾಸಗಿ, 70,586 ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. 3,62,509 ಬಾಲಕಿಯರು, ಮತ್ತು 3,63,704 ಬಾಲಕರು ಸೇರಿದ್ದಾರೆ. ಕಲಾ ವಿಭಾಗದಿಂದ 2,34,815, ವಾಣಿಜ್ಯದಲ್ಲಿ 2,47,269 ಮತ್ತು ವಿಜ್ಞಾನ ವಿಭಾಗದಿಂದ 2,44,129 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.

Also Read  ಸಿಬಿಐ ಮಾಜಿ ನಿರ್ದೇಶಕ ಅಶ್ವನಿ ಕುಮಾರ್ ನೇಣಿಗೆ ಶರಣು

 

error: Content is protected !!
Scroll to Top