ಮಂಗಳೂರಿನಲ್ಲಿ ದೇಶದಲ್ಲಿಯೇ ಗರಿಷ್ಠ ತಾಪಮಾನ    ➤ 38.8 ಡಿ.ಸೆ ದಾಖಲು

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.09. ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಏರಿಕೆಯಾಗುತ್ತಿದ್ದು, ಕರಾವಳಿ ಭಾಗದಲ್ಲಿ ಮತ್ತೊಮ್ಮೆ ತಾಪಮಾನ ದೇಶದಲ್ಲೇ ದಾಖಲೆಯ ಮಟ್ಟಕ್ಕೆ ತಲುಪಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 38.8 ಡಿ.ಸೆ. ದಾಖಲಾಗಿದ್ದು ಇದು ದೇಶದಲ್ಲಿಯೇ ಗರಿಷ್ಟ ತಾಪಮಾನವಾಗಿದೆ.

ಈ ಬಾರಿ ಬೇಸಿಗೆಯು ವಾಡಿಕೆಗಿಂತ ಮೊದಲೇ ಪ್ರಾರಂಭವಾಗಿದೆ. ಇನ್ನು ಮಾರ್ಚ್‌ ಎರಡನೇ ವಾರದಿಂದ ಬಿಸಿಲ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಕೆಲವು ಕಡೆ ಸಾಮಾನ್ಯಕ್ಕಿಂತ 3 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗುವ ಸಾಧ್ಯತೆಗಳಿವೆ ಎಂದು ವರದಿ ತಿಳಿಸಿದೆ.

Also Read   ಕ್ಷಣಾರ್ಧದಲ್ಲಿ ಹಾವು ಕಡಿತದಿಂದ ಬಚಾವ್ ಆದ ಬಾಲಕಿ!

 

error: Content is protected !!
Scroll to Top