➤ಹಿರಿಯ ವಿದ್ವಾಂಸ ಪ್ರೊ. ಮಲೆಯೂರು ಗುರುಸ್ವಾಮಿ ನಿಧನ

(ನ್ಯೂಸ್ ಕಡಬ) newskadaba.com. ಮಾ 9. ಚಾಮರಾಜನಗರ. ಹಿರಿಯ ವಿದ್ವಾಂಸ ಪ್ರೊ. ಮಲೆಯೂರು ಗುರುಸ್ವಾಮಿ (76) ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ  ಬಳಲುತ್ತಿದ್ದ ಮಲೆಯೂರು ಗುರುಸ್ವಾಮಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇವರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ನ ನಿಕಟಪೂರ್ವ ರಾಜ್ಯಾಧ್ಯಕ್ಷರಾಗಿದ್ದರು. ಇಂದು ಮಧ್ಯಾಹ್ನ ಚಾಮರಾಜನಗರ ತಾಲೂಕಿನ ಮಲೆಯೂರಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ.

Scroll to Top