(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ. 09. ಮನೆಯ ಬೀಗ ತೆಗೆದು ಲಕ್ಷಾಂತರ ರೂ ಮೌಲ್ಯದ ನಗ ನಗದು ಕಳವು ಮಾಡಿದ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ನಡೆದಿದೆ.
ಒಟ್ಟು 3,11,550 ರೂ. ಮೌಲ್ಯದ ಚಿನ್ನಾಭರಣ ಕಳವುವಾಗಿದ್ದು, ಸಣ್ಣ ಪ್ಲಾಸಿಕ್ ಬಾಕ್ಸ್ನಲ್ಲಿ ಇಟ್ಟಿದ್ದ ಕಿವಿಯ ಬೆಂಡೋಳೆ ಅಂದಾಜು 10 ಗ್ರಾಂ, 3 ಉಂಗುರಗಳು ಅಂದಾಜು ತೂಕ 8 ಗ್ರಾಂ, ಹವಳದ ಸರ ಅಂದಾಜು ತೂಕ 20 ಗ್ರಾಂ ಹಾಗೂ ಅದರ ಪಕ್ಕದಲ್ಲಿ ಇಟ್ಟಿದ್ದ ಕರಿಮಣಿ ಸರ, ಅಂದಾಜು ತೂಕ 35 ಗ್ರಾಂ, 2 ಕೈಬಳೆಗಳು ಅಂದಾಜು ತೂಕ 20ಗ್ರಾಂ, ಇವುಗಳು ಕಳವಾಗಿದೆ.