ಪುತ್ತೂರು: ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳ ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 09. ಕೌಕ್ರಾಡಿಯ ದಡ್ಡಲಪಲ್ಕೆ ಎಂಬಲ್ಲಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಕಳೆದೈದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಆರೋಪಿಗಳನ್ನು ಪುತ್ತೂರು ಸಂಚಾರ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.

ಬಂಧಿತ ಆರೋಪಿಯನ್ನು ಕುಣಿಗಲ್ ಮೂಲದ ಮೂರ್ತಿ ಹಾಗೂ ತೆಂಕಿಲ ನಿವಾಸಿ ಪವನ್ ಎಂದು ಗುರುತಿಸಲಾಗಿದೆ. ಮೂರ್ತಿ ಬಸ್ ಚಾಲಕನಾಗಿದ್ದು, 2014ರ ಮೇನಲ್ಲಿ ದಡ್ಡಲಪಲ್ಕೆ ಎಂಬಲ್ಲಿ ಬಸ್, ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿತ್ತು. ಇದೀಗ ಬೆಂಗಳೂರಿನ ಹೊಸಕೋಟೆಯಲ್ಲಿ ಮೂರ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತೆಂಕಿಲ ನಿವಾಸಿ ಪವನ್ ಎಂಬಾತ ಎಎಸ್‌ಐ ಮೇಲೆ ಹಲ್ಲೆ ನಡೆಸಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ 2022ರಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಎಎಸ್‌ಐ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಈತ ಎರಡನೇ ಆರೋಪಿಯಾಗಿದ್ದ. ನಗರ ಠಾಣೆ ಪೊಲೀಸರು ಪವನ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Also Read  ಬೈಕ್ ಅಪಘಾತ- ಸವಾರ ಗಂಭೀರ..!

error: Content is protected !!
Scroll to Top