ಹೊಲದಲ್ಲಿ ಸಿಕ್ಕ ನಾಲ್ಕು ಹುಲಿಮರಿಗಳನ್ನು ರಕ್ಷಣೆ ಮಾಡಿದ ಗ್ರಾಮಸ್ಥರು !

(ನ್ಯೂಸ್ ಕಡಬ)newskadaba.com ತಿರುಪತಿ, ಮಾ.09. ಅಂಧ್ರಪ್ರದೇಶದ ಆತ್ಮಾಕೂರು ಅರಣ್ಯ ವಲಯದಲ್ಲಿ ತಾಯಿಯಿಂದ ತಪ್ಪಿಸಿಕೊಂಡ ನಾಲ್ಕು ಹುಲಿಮರಿಗಳನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ದಾರೆ. ನಂದ್ಯಾಲ ಜಿಲ್ಲೆಯ ಕೋಟಪಲ್ಲಿ ತಾಲೂಕಿನ ಪೆದ್ದ ಗುಮ್ಮದಪುರಂನಲ್ಲಿ ಈ ಘಟನೆ ನಡೆದಿದೆ.


ಅರಣ್ಯಕ್ಕೆ ಹೊಂದಿಕೊಂಡಿರುವ ಪೆದ್ದ ಗುಮ್ಮದಪುರಂನ ಹೊಲದಲ್ಲಿನ ಫಾರ್ಮ್ ಹೌಸ್ ಬಳಿ ನಾಲ್ಕು ಹುಲಿ ಮರಿಗಳು ಪತ್ತೆಯಾಗಿದ್ದವು. ಗ್ರಾಮಸ್ಥರು ಅವನ್ನು ಕಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಆತ್ಮಾಕೂರು ಅರಣ್ಯ ವಲಯದ ಅಧಿಕಾರಿಗಳು ‘ಹುಲಿ ಮರಿಗಳನ್ನು ಕಾಡಿನಲ್ಲಿ ಬಿಟ್ಟಿದ್ದು, ಅವುಗಳು ತಾಯಿ ಹುಲಿ ಬಳಿ ಸುರಕ್ಷಿತವಾಗಿ ಸೇರಿವೆ.

Scroll to Top