(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 09. ಚುನಾವಣಾ ಹೊಸ್ತಿಲಲ್ಲೇ ಅನ್ನಭಾಗ್ಯ ಯೋಜನೆಯಡಿ ರಾಜ್ಯಾದ್ಯಂತ ಪಡಿತರ ಪಡೆಯುತ್ತಿರುವ SC ಮತ್ತು ST ಫಲಾನುಭವಿಗಳು ಹೊಂದಿರುವ ಪಡಿತರ ಚೀಟಿ ಬಗ್ಗೆ ರಾಜ್ಯ ಸರಕಾರ ಮಾಹಿತಿ ಪಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ ನಿಗದಿತ ಬಜೆಟ್ ಅನುದಾನ ಹಂಚಿಕೆ ಹೆಸರಿನಲ್ಲಿ ರಾಜ್ಯ ಸರಕಾರ ಈ ರೀತಿ ಮೊದಲ ಬಾರಿಗೆ ರೇಷನ್ ಕಾರ್ಡ್‍ಗಳ ಬಗ್ಗೆ ಮಾಹಿತಿ ಕೇಳಿದೆ. ಅಲ್ಲದೆ, ಹಿಂದೊಮ್ಮೆ ರೇಷನ್ ಕಾರ್ಡ್‍ಗೆ ಆಧಾರ್ ದೃಢೀಕರಣ(ಈಕೆವೈಸಿ) ಪ್ರಕ್ರಿಯೆ ಸಂದರ್ಭದಲ್ಲಿಯೂ ಎಸ್ಸಿ ಮತ್ತು ಎಸ್ಟಿ ಜಾತಿ ಬಗ್ಗೆ ಮಾಹಿತಿ ಪಡೆಯಲಾಗಿತ್ತು. ಈ ವೇಳೆ ಆ ಪಂಗಡದ ಫಲಾನುಭವಿಗಳು ತಮ್ಮ ಮಾಹಿತಿಯನ್ನು ನ್ಯಾಯಬೆಲೆ ಅಂಗಡಿಯವರಿಗೆ ನೀಡಿದ್ದರು.