(ನ್ಯೂಸ್ ಕಡಬ) newskadaba.com ತುಮಕೂರು, ಮಾ. 09. ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಇಂದಿನಿಂದ(ಮಾ.9) ಆರಂಭವಾಗಿದ್ದು, ಈ ಹಿನ್ನೆಲೆ ತಿಪಟೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಒಟ್ಟು 5,716 ಕಾಲೇಜುಗಳಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಎಚ್ಚರವಹಿಸಲು 1,109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತ ದಳ, 525 ತಾಲೂಕು ಜಾಗೃತ ದಳ ಮತ್ತು 2,373 ವಿಶೇಷ ಜಾಗೃತ ದಳದವರನ್ನು ನೇಮಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆ ನಡೆಸಲಾಗುವುದು’ ಎಂದು ತಿಳಿಸಿದರು.