ಯುವತಿಯರಿಬ್ಬರ ನಡುವೆ ಬೀದಿ ರಂಪಾಟ ➤ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಧಾರವಾಡ, ಮಾ. 09. ಯುವತಿಯರಿಬ್ಬರ ಮಧ್ಯೆ ಬೀದಿ ರಂಪಾಟ ನಡೆದ ಘಟನೆ ಧಾರವಾಡದ ಓಲ್ಡ್ ಡಿಎಸ್ಪಿ ಸರ್ಕಲ್ ಬಳಿ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಯುವತಿಯರಿಬ್ಬರು ಒಂದೇ ಕಾರಿನಲ್ಲಿ ಜೊತೆಯಾಗಿ ಬಂದಿದ್ದರು. ಮೊದಲು ಕಾರಿನಲ್ಲಿ ಇಬ್ಬರ ಮಧ್ಯೆ ಜಗಳ ಆರಂಭವಾಗಿದೆ. ಬಳಿಕ ರಸ್ತೆ ಪಕ್ಕದಲ್ಲಿ ಕಾರು ನಿಲ್ಲಿಸಿ ಕಾರಿನ ಒಳಗೆ ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಇದಾದ ನಂತರ ಕಾರಿನಿಂದ ಕೆಳಗೆ ಇಳಿದು, ಪರಸ್ಪರ ಕೂದಲನ್ನು ಹಿಡಿದು ಎಳೆದಾಡಿದ್ದಾರೆ. ಅಲ್ಲದೆ, ಇಬ್ಬರು ಕೆಟ್ಟ ಪದಗಳಿಂದ ನಿಂದಿಸಿಕೊಂಡಿದ್ದಾರೆ.

Also Read  ಮಂಗಳೂರು: ಬೈಕ್ ಅಪಘಾತ; ಯುವಕ ಮೃತ್ಯು

error: Content is protected !!
Scroll to Top