(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 09. ಅಲ್ಪ ಪ್ರಮಾಣದ ಬೆಂಕಿ ಅವಘಡ ಸಂಭವಿಸಿದ ಘಟನೆ ನಗರದ ಅತ್ತಾವರದ ಅಪಾರ್ಟ್ಮೆಂಟ್ ವೊಂದರಲ್ಲಿ ಸಂಭವಿಸಿದೆ.
ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ ಎರಡನೇ ಮಹಡಿಯಲ್ಲಿರುವ ಫ್ಲ್ಯಾಟ್ ನಿಂದ ರಾತ್ರಿ ಸುಮಾರು 7:30ರ ವೇಳೆಗೆ ಹೊಗೆ ಬರುತ್ತಿದ್ದುದನ್ನು ಗಮನಿಸಿದ ಇತರ ಫ್ಲ್ಯಾಟ್ ನಿವಾಸಿಗಳು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿ, ದೊಡ್ಡ ಅನಾಹುತವನ್ನು ತಪ್ಪಿಸಿದಂತಾಗಿದೆ.