ಎರಡು ಪ್ರತ್ಯೇಕ ಪ್ರಕರಣ !     ➤ ಗಾಂಜಾ ನಶೆಯಲ್ಲಿದ್ದ ಇಬ್ಬರು ಆರೋಪಿಗಳು ಅರೆಸ್ಟ್​     

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.10. ಗಾಂಜಾ ಸೇವಿಸಿ ನಶೆಯಲ್ಲಿದ್ದ ಇಬ್ಬರನ್ನು ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಅಲಿಕೋಡೆ ನಿವಾಸಿ ಮುಹಮ್ಮದ್ ಅಸ್ಕರ್ (26) ಎಂಬಾತ ಮಾದಕ ಸೇವನೆ ಪ್ರಕರಣದಲ್ಲಿ ಮಂಗಳೂರು ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ.

ಈತನನ್ನು ಕೇರಳದಲ್ಲಿ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆಯೂ ಆತ ಗಾಂಜಾ ನಶೆಯಲ್ಲಿರುವುದು ಪೊಲೀಸರ ಗಮನಕ್ಕೆ ಬಂದಿದೆ. ತಕ್ಷಣ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಅಡ್ಯಾರ್ ಕಣ್ಣೂರು ಬಳಿಯ ಕೊಡಕ್ಕಲ್ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ವ್ಯಕ್ತಿಯೋರ್ವನು ನಿಂತುಕೊಂಡಿದ್ದ. ಈತನನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದಾಗ ಗಾಂಜಾ ಸೇವನೆ ಮಾಡಿರುವುದು ಪತ್ತೆಯಾಗಿದೆ. ಆಲ್ವಿನ್ ಸಿಕ್ವೆರಾ (37) ಎಂಬ ಹೆಸರಿನ ಈತ ಬಿಜೈ ಆನೆಗುಂಡಿಯ ನಿವಾಸಿಯಾಗಿದ್ದಾನೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Also Read  ವಿಷ ಸೇವಿಸಿ ಬಳಿಕ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನ ➤ ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಮೃತ್ಯು..!!

error: Content is protected !!
Scroll to Top