ಸುಳ್ಯ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 10. ಯುವಕನೋರ್ವ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಮರಪಡ್ನೂರು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಅಮರಪಡ್ನೂರು ಗ್ರಾಮದ ಕುಳ್ಳಾಜೆ ನಿವಾಸಿ ಪ್ರಶಾಂತ್ ಎಂದು ಗುರುತಿಸಲಾಗಿದೆ. ಈತ ಮನೆಯ ಪಕ್ಕದ ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಮನೆಯವರ ಗಮನಕ್ಕೆ ಬಂದ ತಕ್ಷಣವೇ ಹಗ್ಗ ತುಂಡರಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Also Read  ಗುತ್ತಿಗಾರು : ಸಿಕ್ಕಿಬಿದ್ದ ಚಿನ್ನದ ಸರವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಯುವಕ

error: Content is protected !!
Scroll to Top