(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.10. ಮನೆಯ ಸಾಕು ನಾಯಿಯ ಮೇಲೆ ಚಿರತೆಯೊಂದು ದಾಳಿ ನಡೆಸಲು ಯತ್ನಿಸಿದ ಘಟನೆ ಸಂಭವಿಸಿದ ಹಿನ್ನೆಲೆಯಲ್ಲಿ ನಡೆಸಲಾದ ಆಪರೇಷನ್ ಚೀತಾ ಇಂದು ಮಾರ್ಚ್ 10ರಂದು ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.
ಆ ಮೂಲಕ ಏಳನೇ ಚಿರತೆಯ ಬಂಧನವಾಗಿದ್ದು, ತಾಲೂಕಿನ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿ ಎಂಬಲ್ಲಿನ ಶ್ರೀ ನಂದಿಕೇಶ್ವರ ದೇವಸ್ಥಾನ ಹಾಗೂ ಅಂಗನವಾಡಿ, ಶಾಲೆ ಹಾಗೂ ಜನವಸತಿಯಿರುವ ಪ್ರದೇಶದ ಸನಿಹದಲ್ಲೇ ಇರುವ ತೋಪಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಚಿರತೆ ಕಾಟ ನಿರಂತರವಾಗಿದ್ದು, ಭಾನುವಾರ ಆರನೇ ಚಿರತೆಯನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.
