(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 10. ಬೈಕ್ ಸ್ಕಿಡ್ ಆಗಿ ಬಿದ್ದು ಸವಾರನೋರ್ವ ಗಾಯಗೊಂಡ ಘಟನೆ ಅಲೆಟ್ಟಿ ಎಂಬಲ್ಲಿ ನಡೆದಿದೆ.
ಗಾಯಗೊಂಡ ಸವಾರನನ್ನು ಅಲೆಟ್ಟಿ ನಿವಾಸಿ ಮಹಾಬಲ ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕ್ ನಲ್ಲಿ ಸುಳ್ಯ ಕಡೆಗೆ ಬರುತ್ತಿದ್ದ ವೇಳೆ ನಾಯಿ ಅಡ್ಡ ಬಂದಿದ್ದು, ಪರಿಣಾಮ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣವೇ ಸ್ಥಳೀಯರ ಸಹಕಾರದಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.
Also Read ಕಾಶ್ಮೀರ ವಿಚಾರ ಮುಂದಿಟ್ಟುಕೊಂಡು ಚೀನಾಗೆ ತೆರಳಿದ್ದ ಪಾಕ್ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿಗೆ ಆಘಾತ