ಬೆಳ್ತಂಗಡಿ: ಗಾಂಜಾ ಸೇವನೆ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 10. ಬಸ್‌ ನಿಲ್ದಾಣದ ಬಳಿ ಅಮಲು ಪದಾರ್ಥ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಕುವೆಟ್ಟು ಗ್ರಾಮ ಮದ್ದಡ್ಕ ಮನೆ ಶೇಖ್‌ ಜಹೀರ್‌ (26) ಎಂದು ಗುರುತಿಸಲಾಗಿದೆ. ಪೊಲೀಸರು ಪರಿಶೀಲಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈತ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಸೇವಸುವ ಕುರಿತು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Scroll to Top