ಸುಳ್ಯ: ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕೇರಳದಲ್ಲಿ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 10. ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಕಳೆದ 4 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ವರದಿಯಾಗಿದೆ.

 

ಬಂಧಿತ ಆರೋಪಿಯನ್ನು ಜಟ್ಟಿಪಳ್ಳ ನಿವಾಸಿ ಅಶ್ರಫ್ ರಿಪ್ವಾನ್‌ ಎಂದು ಗುರುತಿಸಲಾಗಿದೆ. 2019ರಲ್ಲಿ ಕಾರು ಮತ್ತು ಬೈಕ್‌ ಕಳ್ಳತನದಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದು ಹೊರಬಂದಿದ್ದು, ಮತ್ತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಅಲ್ಲದೇ ವಾರಂಟ್ ನಲ್ಲಿರುವ ವಿಳಾಸದಲ್ಲಿ ವಾಸವಾಗದೇ ಪೊಲೀಸರಿಗೂ ಸಿಗದೇ ಕೇರಳಕ್ಕೆ ಹೋಗಿ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನು ಕೇರಳದ ಕಣ್ಣೂರಿನಲ್ಲಿ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಳ್ಯ ಪೊಲೀಸ್‌ ಠಾಣಾ ಉಪ ನಿರೀಕ್ಷಕ ದಿಲೀಪ್‌ ಅವರ ಮಾರ್ಗದರ್ಶನದಂತೆ ಪೊಲೀಸ್‌ ಸಿಬಂದಿ ಉಮೇಶ್‌ ಹಾಗೂ ಪುರುಷೋತ್ತಮ್‌ ಅವರು ಕೇರಳದ ಕಣ್ಣೂರಿಗೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Also Read  ದೇವಸ್ಥಾನ ಧ್ವಂಸ-ಬಿಸಾಡಿದ್ದ ಶ್ರೀರಾಮನ ವಿಗ್ರಹ ನದಿಯಲ್ಲಿ ಪತ್ತೆ        

error: Content is protected !!
Scroll to Top