ಮಾ. 12ರಂದು ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆ ➤ ಸಂಚಾರ ಮಾರ್ಗದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 10. ಮಾರ್ಚ್‌ 12 ರಂದು ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್​ವೇ ದಶಪಥ ಹೆದ್ದಾರಿಯನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದು, ಈ ಹಿನ್ನೆಲೆ ಮಾರ್ಚ್​ 12 ರಂದು ಬೆಳಿಗ್ಗೆ 6 ರಿಂದ ಸಾಯಂಕಾಲ 6 ಗಂಟೆಯವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

ಮೈಸೂರಿನಿಂದ ಬೆಂಗಳೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ವಾಹನಗಳು ಮೈಸೂರು – ಬನ್ನೂರು – ಕಿರುಗಾವಲು – ಮಳವಳ್ಳಿ – ಹಲಗೂರು – ಕನಕಪುರ – ಬೆಂಗಳೂರು ಮಾರ್ಗವಾಗಿ ತೆರಳಬೇಕು.

ಮೈಸೂರಿನಿಂದ ತುಮಕೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ರೀತಿಯ ವಾಹನಗಳು ಮೈಸೂರು – ಶ್ರೀರಂಗಪಟ್ಟಣ – ಪಾಂಡವಪುರ – ನಾಗಮಂಗಲ – ಬೆಳ್ಳೂರು ಕ್ರಾಸ್ – ತುಮಕೂರು ಮಾರ್ಗವಾಗಿ ಹಾದು ಹೋಗಬೇಕು.

Also Read  ವಟ ಯಕ್ಷಿಣಿ ವಶ ಮತ್ತು ದಿನ ಭವಿಷ್ಯ

ತುಮಕೂರಿನಿಂದ ಮೈಸೂರಿಗೆ ಮದ್ದೂರು ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ವಾಹನಗಳು ತುಮಕೂರು- ಬೆಳ್ಳೂರು ಕ್ರಾಸ್- ನಾಗಮಂಗಲ-ಪಾಂಡವಪುರ- ಶ್ರೀರಂಗಪಟ್ಟಣ ಮೈಸೂರು ಮಾರ್ಗವಾಗಿ ಹೋಗಬೇಕು.

ಬೆಂಗಳೂರಿನಿಂದ ಮೈಸೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ರೀತಿಯ ವಾಹನಗಳು ಬೆಂಗಳೂರು – ಚನ್ನಪಟ್ಟಣ – ಹಲಗೂರು – ಮಳವಳ್ಳಿ – ಕಿರುಗಾವಲು -ಬನ್ನೂರು – ಮೈಸೂರು ಸಂಚರಿಸಬೇಕು.
ಬೆಂಗಳೂರಿನಿಂದ ಮದ್ದೂರು ಮಾರ್ಗವಾಗಿ ಕೊಳ್ಳೇಗಾಲ-ಮಹದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲ ರೀತಿಯ ವಾಹನಗಳು ಬೆಂಗಳೂರು – ಚನ್ನಪಟ್ಟಣ – ಹಲಗೂರು – ಮಳವಳ್ಳಿ – ಕೊಳ್ಳೇಗಾಲ ಮಹದೇಶ್ವರಬೆಟ್ಟ ಮಾರ್ಗವಾಗಿ ಸಂಚರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Also Read  ಈ 8 ರಾಶಿಯವರಿಗೆ ಮದುವೆ ಯೋಗ, ವ್ಯಾಪಾರ ಅಭಿವೃದ್ಧಿ, ಅಂದುಕೊಂಡ ಕಾರ್ಯ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ

error: Content is protected !!
Scroll to Top