ನಾಪತ್ತೆಯಾಗಿದ್ದ ಹದಿಹರೆಯದ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ        ➤ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಶಂಕೆ     

(ನ್ಯೂಸ್ ಕಡಬ)newskadaba.com  ಉತ್ತರ ಪ್ರದೇಶ, ಮಾ.10. ತಿರ್ವಾದಲ್ಲಿ  ನಾಪತ್ತೆಯಾಗಿದ್ದ 14 ವರ್ಷದ ಹದಿಹರೆಯದ ಬಾಲಕಿ ತನ್ನ ಊರ ಹೊರಗಡೆ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಬಾಲಕಿ ಕುರಿತು ಆಕೆಯ ತಂದೆ ತಿರ್ವಾದಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಹದಿಹರೆಯದ ಬಾಲಕಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಮರದಿಂದ ಕೆಳಗೆ ಇಳಿಸಿ, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಾನುವಾರುಗಳಿಗೆ ಮೇವು ತರಲು ಹೋದ ಬಾಲಕಿಯನ್ನು ಅಪಹರಿಸಿ, ಬಳಿಕ ಕೊಲೆ ಮಾಡಲಾಗಿದೆ. ಆತ್ಮಹತ್ಯೆ ಎಂದು ಬಿಂಬಿಸಲು ಮರಕ್ಕೆ ದುಪ್ಪಟದಿಂದ ನೇಣು ಬಿಗಿದ ರೀತಿಯಲ್ಲಿ ಆಕೆಯನ್ನು ಹಾಕಲಾಗಿದೆ ಎಂದು ಮೃತ ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

Also Read  ಭಾರತದ ಗಡಿಯೊಳಗೆ ಉಗ್ರರಿಂದ ನುಸುಳಲು ಯತ್ನ ➤ ಇಬ್ಬರು ಶಂಕಿತ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

 

error: Content is protected !!
Scroll to Top