ಕೆಲಸಕ್ಕಾಗಿ ಭೂಮಿ ಹಗರಣ ➤ ತೇಜಸ್ವಿ ಯಾದವ್ ನಿವಾಸದ ಮೇಲೆ ಇ.ಡಿ ದಾಳಿ



(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಮಾ.10. ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ದಿಲ್ಲಿಯಲ್ಲಿನ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಶುಕ್ರವಾರ ದಾಳಿ ನಡೆಸಿದೆ. ‘ಉದ್ಯೋಗಕ್ಕಾಗಿ ಭೂಮಿ’ ಹಗರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ನಾಯಕ ಹಾಗೂ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಕುಟುಂಬದ ಮೇಲೆ ಕಣ್ಣಿಟ್ಟಿರುವ ಇ.ಡಿ ನಡೆಸಿರುವ ದಾಳಿ ಸಂಚಲನ ಮೂಡಿಸಿದೆ.







ಕೆಲವು ದಿನಗಳ ಹಿಂದಷ್ಟೇ ಸಿಬಿಐ ಅಧಿಕಾರಿಗಳು ಲಾಲು ಪ್ರಸಾದ್ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಅವರ ಪತ್ನಿ ಹಾಗೂ ಬಿಹಾರದ ಮಾಜಿ ಸಿಎಂ ರಾಬ್ರಿ ದೇವಿ ಅವರನ್ನೂ ಪ್ರಶ್ನಿಸಲಾಗಿತ್ತು. ಲಾಲೂ ಅವರ ಇಡೀ ಕುಟುಂಬ ಈ ಹಗರಣದಲ್ಲಿ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ.






error: Content is protected !!
Scroll to Top