ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಸಚಿವೆ ಶೋಭಾ ಕರಂದ್ಲಾಜೆ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 10. ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಯನ್ನು ರಚಿಸಲಾಗಿದ್ದು, ನಿರ್ವಹಣಾ ಸಮಿತಿಯ ಸಂಚಾಲಕರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಆಯ್ಕೆ ಮಾಡಲಾಗಿದೆ.

ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರು ಸಮಿತಿಗಳನ್ನು ರಚನೆ ಮಾಡಿದ್ದಾರೆ. ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇಮಕವಾದರೆ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ. 25 ಜನರ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯಲ್ಲಿ ಮಾಜಿ ಸಿ.ಎಂ ಬಿ. ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವರಾದ ಕೆ. ಎಸ್ ಈಶ್ವರಪ್ಪ, ರಮೇಶ್ ಜಾರಕಿಹೊಳಿ ಮತ್ತು ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸ್ಥಾನ ನೀಡಲಾಗಿದೆ. ಚುನಾವಣಾ ನಿರ್ವಹಣಾ ಸಮಿತಿಯಲ್ಲಿ 14 ನಾಯಕರನ್ನು ನೇಮಕ ಮಾಡಲಾಗಿದ್ದು, ಇದರಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಸ್ಥಾನವನ್ನು ತೇಜಸ್ವಿನಿ ಅನಂತಕುಮಾರ್ ಗೆ ನೀಡಲಾಗಿದೆ.

Also Read  15ನೇ ಬಜೆಟ್ ಮಂಡನೆ- ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ಹಾಗೂ ವಕ್ಫ್ ಗೆ 100 ಕೋಟಿ ರೂ. ಘೋಷಣೆ

error: Content is protected !!
Scroll to Top