ಮಾ. 11ರಂದು ವಿಜಯ- ವಿಕ್ರಮ ಜೋಡುಕರೆ ಕಂಬಳ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 10. ಇಲ್ಲಿನ 37ನೇ ವರ್ಷದ ಹೊನಲು ಬೆಳಕಿನ ವಿಜಯ- ವಿಕ್ರಮ ಜೋಡುಕರೆ ಕಂಬಳವು ಮಾ.11ರಂದು ಉಪ್ಪಿನಂಗಡಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರ ಸಾರಥ್ಯದಲ್ಲಿ ನಡೆಯಲಿದೆ. ಬೆಳಗ್ಗೆ 8ರಿಂದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಿಂದ ಕಂಬಳ ಅಭಿಮಾನಿಗಳು, ಕಂಬಳ ಕೋಣಗಳ ವೈಭವದ ಮೆರವಣಿಗೆಯು ಕಂಬಳ ಕೆರೆಯವರೆಗೆ ನಡೆಯಲಿದ್ದು, ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 9:31ಕ್ಕೆ ಉದ್ಯಮಿ ನಟೇಶ್ ಪೂಜಾರಿ ಕಂಬಳವನ್ನು ಉದ್ಘಾಟಿಸಲಿದ್ದು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕರುಣಾಕರ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಪೂರ್ವಾಹ್ನ 10:31ಕ್ಕೆ ನೇಗಿಲು ಕಿರಿಯ ವಿಭಾಗದ ಕೋಣಗಳು ಕೆರೆಗೆ ಇಳಿಯಲಿದ್ದು, 11:30ಕ್ಕೆ ಹಗ್ಗ ಹಿರಿಯ, ಮಧ್ಯಾಹ್ನ 12:30ಕ್ಕೆ ನೇಗಿಲು ಹಿರಿಯ, ಮಧ್ಯಾಹ್ನ 2ಕ್ಕೆ ಹಗ್ಗ ಹಿರಿಯ, ಅಡ್ಡ ಹಲಗೆ ಮತ್ತು ಕನೆಹಲಗೆ ವಿಭಾಗದ ಕೋಣಗಳು ಸಂಜೆ 4ಗಂಟೆಗೆ ಕೆರೆಗೆ ಇಳಿಯಲಿದೆ.

ಮುಖ್ಯ ಅತಿಥಿಗಳಾಗಿ ಉದ್ಯಮಿ ಧನ್ಯಕುಮಾರ್ ರೈ, ಕದಿಕ್ಕಾರು ಬೀಡಿನ ಪ್ರವೀಣ್ ಕುಮಾರ್, ನಿವೃತ ಸೈನಿಕ ವಿಶ್ವನಾಥ ಶೆಣೈ, ಉದ್ಯಮಿ ರಾಜೇಶ್ ರೈ, ಉಪ್ಪಿನಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಜಿ. ಜಗದೀಶ್ ನಾಯಕ್, ಉಪ್ಪಿನಂಗಡಿ ದೀನರ ಕನ್ಯಾಮಾತೆ ದೇವಾಲಯದ ಧರ್ಮಗುರು ರೆ.ಫಾ. ಏಬೆಲ್ ಲೋಬೋ, ಉಪ್ಪಿನಂಗಡಿ ಮಾಲೀಕುದ್ದೀನಾರ್ ಮಸೀದಿ ಅಧ್ಯಕ್ಷ ಹಾಜಿ ಮುಸ್ತಫ ಕೆಂಪಿ, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಸಂಕಪ್ಪ ಶೆಟ್ಟಿ, ಉಪ್ಪಿನಂಗಡಿ ಕಟ್ಟಡ ಕಾರ್ಮಿಕ ಸಂಘದ ಕಾರ್ಯದರ್ಶಿ ಮಹಾಲಿಂಗ ಕಜೆಕ್ಕಾರು, ಉದ್ಯಮಿ ಸುರೇಶ್ ಭಾಗವಹಿಸಲಿದ್ದಾರೆ. ಸಂಜೆ 6ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಮಾಜಿ ಸಚಿವರಾದ ಬಿ. ರಮಾನಾಥ ರೈ, ವಿನಯಕುಮಾರ್ ಸೊರಕೆ, ಶಾಸಕ ಯು.ಟಿ. ಖಾದರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಉದ್ಯಮಿ ಸತ್ಯಶಂಕರ ಭಟ್, ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುಗುತ್ತು, ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಉದ್ಯಮಿ ಉಮೇಶ್ ನಾಡಾಜೆ, ಸಮಾಜ ಕಲ್ಯಾಣ ಇಲಾಖೆಯ ಮಾಜಿ ಅಧ್ಯಕ್ಷೆ ಶ್ರೀಮತಿ ದಿವ್ಯಪ್ರಭಾ ಚಿಲ್ತಡ್ಕ, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ., ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಬನ್ನೂರು ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ರೋಹಿತ್ ಹೆಗ್ಡೆ ಎರ್ಮಾಲ್, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಮೊದಲಾದವರು ಭಾಗವಹಿಸಲಿದ್ದಾರೆ. ಈ ಸಂದರ್ಭ ಕಂಬಳ ಕೋಣಗಳ ಯಜಮಾನ ಅಮ್ಟೂರು ಗ್ರಾಮದ ಕೃಷ್ಣಾಪುರ ನಡುಮನೆ ಪರಮೇಶ್ವರ ಸಾಲ್ಯಾನ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಮಾ.12ರಂದು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Also Read  ಈ ರಾಶಿಯವರನ್ನು ನೀವು ಮದುವೆ ಆದರೆ….? ನಿಮ್ಮ ಅದೃಷ್ಟವೇ ಬದಲಾಗಲಿದೇ ನೀವು ಅಂದುಕೊಂಡಂತೆ ಜೀವನ ನಡೆಸಬಹುದು.

error: Content is protected !!
Scroll to Top