ಡೇ ಕೇರ್‌ನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ      ➤ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ       

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ಎಟಿಎಸ್‌ಸಿ 1ನೇ ನ್ಯಾಯಾಲಯ ತೀರ್ಪು ನೀಡಿದೆ.

ಯಲಹಂಕದ ಚಿಕ್ಕಬೊಮ್ಮಸಂದ್ರ ನಿವಾಸಿ ಅಶ್ವಥನಾರಾಯಣರಾವ್ (57) ಶಿಕ್ಷೆಗೆ ಒಳಗಾದ ಅಪರಾಧಿ.

2019ರಲ್ಲಿ ಡೇ ಕೇರ್‌ನಲ್ಲಿ ಮಕ್ಕಳನ್ನು ನೋಡಿಕೊಳ್ಳಲು ಅಪರಾಧಿ ಹೋಗುತ್ತಿದ್ದ. 2019ರ ಆ.30ರ ಮಧ್ಯಾಹ್ನ ಡೇ ಕೇರ್‌ನಲ್ಲಿ 5 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ನೊಂದ ಬಾಲಕಿಯ ಪಾಲಕರು ಯಲಹಂಕ ಉಪನಗರ ಠಾಣೆಗೆ ದೂರು ಸಲ್ಲಿಸಿದ್ದರು. ಇದರ ಮೇರೆಗೆ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು, ಅಶ್ವಥನಾರಾಯಣ ರಾವ್‌ನನ್ನು ಬಂಧಿಸಿ ಜೈಲಿಗೆ ಕಳುಹಿಸಿ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದರು.

Also Read  ಕುಕ್ಕೆ ಸುಬ್ರಮಣ್ಯಕ್ಕೆ ಸಿಎಂ ಬೊಮ್ಮಾಯಿ ಭೇಟಿ

 

 

error: Content is protected !!
Scroll to Top