(ನ್ಯೂಸ್ ಕಡಬ) newskadaba.com. ಹಾಸನ, ಮಾ.10. ವಸತಿ ಶಾಲೆಯೊಂದರಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಈ ವಸತಿ ನಿಲಯವನ್ನು ನೋಡಿಕೊಳ್ಳಲಾಗುತ್ತಿದೆ.
ವಸತಿ ಶಾಲೆಯಲ್ಲಿ ಓದುತ್ತಿರುವ ಎಂಟು ಅಪ್ರಾಪ್ತ ಬಾಲಕಿಯರಿಗೆ ಆರೋಪಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ. ಜಿಲ್ಲಾ ಮಕ್ಕಳ ಕಲ್ಯಾಣ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.