(ನ್ಯೂಸ್ ಕಡಬ) newskadaba.com ಕಡಬ, ಮಾ.10. ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಲಬಾರ್ ಬಸ್ಸನ್ನು ಓವರ್ಟೇಕ್ ಮಾಡುವ ಭರದಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಸುಬ್ರಹ್ಮಣ್ಯ ನಿವಾಸಿ ಪೈಂಟರ್ ರಮೇಶ್ ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯದ ಇಂಜಾಡಿ ಸಮೀಪ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಪ್ರಶಾಂತ್ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಗಾಯಾಳುವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










