➤ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ!

(ನ್ಯೂಸ್ ಕಡಬ) newskadaba.com. ಮೈಸೂರು, ಮಾ 11. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​ಧ್ರುವನಾರಾಯಣ(61) ಅವರು ಇಂದು ಬೆಳಗ್ಗೆ 6.40ಕ್ಕೆ ಕಾರಿನಲ್ಲಿ ತೆರಳುವಾಗ ಹೃದಯಾಘಾತವಾಗಿದ್ದು ಮೈಸೂರಿನ ಡಿಆರ್​​ಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನಿಧನ ಹಿನ್ನಲೆ ಕಾಂಗ್ರೆಸ್ ರಾಮನಗರ, ದಾವಣಗೆರೆ ಜಿಲ್ಲೆಯಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ರದ್ದು ಮಾಡಲಾಗಿದೆ. ಮತ್ತೊಂದೆಡೆ ಧ್ರುವನಾರಾಯಣ ಅವರ ಸಾವಿಗೆ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿ, ಸತೀಶ್ ಜಾರಕಿಹೊಳಿ, ಶಾಸಕ ಜಿ.ಟಿ.ದೇವೇಗೌಡ ಹಾಗೂ  ಅನೇಕರು ಸಂತಾಪ ಸೂಚಿಸಿದ್ದಾರೆ. ಅವರಿಗೆ ಪೊಲೀಸ್ ಗೌರವಗಳೊಂದಿಗೆ ಅಂತ್ಯ ಕ್ರಿಯೆ ನೆರವೇರಿಸಲಾಗುವುದು ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ.

error: Content is protected !!

Join the Group

Join WhatsApp Group