ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ➤ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com.ಕಾಪು, ಮಾ 11.  ಇಂದು ಬೆಳಗ್ಗೆ ಶಾಲೆಗೆ ಬರುತ್ತಿದ್ದ ಆಕೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿತ್ತು.

ಬಾಲಕಿಯ ತಲೆಗೆ ಗಂಭೀರ ಏಟಾಗಿದ್ದು ಗಂಭೀರ ಗಾಯಗೊಂಡಿರುವ ಆಕೆಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

error: Content is protected !!

Join the Group

Join WhatsApp Group