ಬಿಳಿನೆಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು : ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಮಾ.11. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದು ಚರಂಡಿಗೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಶನಿವಾರದಂದು ನಡೆದಿದೆ.

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬೆಂಗಳೂರು ಮೂಲದವರಿದ್ದ ಡಿಸೈರ್ ಕಾರು ಬಿಳಿನೆಲೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದು ಬಳಿಕ ಚರಂಡಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ‌.

Also Read  ನಾಳೆ 28 ಶಾಸಕರು ಸಚಿವರಾಗಿ ಪದಗ್ರಹಣ

 

error: Content is protected !!