➤5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ವಿಚಾರ ➤ ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ 11. 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಹಿನ್ನೆಲೆ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಕಾರವೆತ್ತಿದ್ದು, ಮಾರ್ಚ್ 14ಕ್ಕೆ‌ ಹೈಕೋರ್ಟ್ ವಿಚಾರಣೆ ಮುಂದೂಡಿದೆ. ಮಾರ್ಚ್ 13ರಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡುವುದಾಗಿ ಸರ್ಕಾರ ತಿಳಿಸಿದೆ. ಈ ಶೈಕ್ಷಣಿಕ ವರ್ಷದಿಂದ 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿದ್ದು, ಬೋರ್ಡ್ ಎಕ್ಸಂಗೆ ತಡೆ ನೀಡುವ ಮೂಲಕ ಹೈಕೋರ್ಟ್‌ ಶಿಕ್ಷಣ ಇಲಾಖೆಗೆ ಬಿಗ್ ಶಾಕ್ ನೀಡಿತ್ತು.

Scroll to Top