ಕಾರಿನೊಳಗೆ ಕುಳಿತ ಸ್ಥಿತಿಯಲ್ಲಿಯೇ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಮಾ. 13. ಕಾರಿನೊಳಗೆ ವ್ಯಕ್ತಿಯೋರ್ವನು ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಜಗದೀಶ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಚಾಲಕರಾಗಿದ್ದ ಇವರು, ತರವಾಡು ಮನೆಯಲ್ಲಿ ದೈವದ ಕಾರ್ಯಕ್ರಮಕ್ಕೆ ಮಕ್ಕಳ ಜೊತೆ ಹೋಗಿದ್ದರು. ವಾಪಾಸು ಮನೆಗೆ ಬರುವ ವೇಳೆ ಕಲ್ಲಡ್ಕ ತಲುಪಿದಾಗ ಕಾರು ಚಲಾಯಿಸಲು ಕಷ್ಟವಾಗುತ್ತಿದೆ ಎಂದು ಬಾವನಲ್ಲಿ ಹೇಳಿ ನಾನು ಮತ್ತೆ ಮನೆಗೆ ಬರುತ್ತೇನೆ ನೀವು ‌‌ಮಕ್ಕಳ ಜೊತೆ ಹೋಗಿ ಎಂದು ‌ಕಳುಹಿಸಿ ಕಾರಿನ ಸೀಟಿನಲ್ಲಿಯೇ ಮಲಗಿದ್ದರು. ಆದರೆ ರಾತ್ರಿ ‌7 ಗಂಟೆಯಾದರೂ ಮನೆಗೆ ಬಾರದ ಹಿನ್ನೆಲೆ ಮತ್ತೆ ಬಂದು ನೋಡಿದಾಗ ಕಾರಿನ ಸೀಟಿನಲ್ಲಿ ಕುಳಿತು ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ತಿಳಿದುಬಂದಿದೆ. ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದರಿಂದ ಗಾಳಿ ಇಲ್ಲದೆ ಮೃತಪಟ್ಟಿರಬಹುದೇ ಎಂಬುದು ವೈದ್ಯಕೀಯ ರಿಪೋರ್ಟ್ ಹಾಗೂ ಪೊಲೀಸ್ ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ.

Also Read  ರಾಜ್ಯದಲ್ಲಿ 17 ಸಾವಿರ ಗಡಿ ದಾಟಿದ ಡೆಂಗ್ಯೂ ಕೇಸ್ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನತೆ ಕಿಡಿ

error: Content is protected !!
Scroll to Top