ಬೈಕ್‌ಗೆ ಆಂಬ್ಯುಲೆನ್ಸ್ ಢಿಕ್ಕಿ ➤ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು..!

ನ್ಯೂಸ್ ಕಡಬ) newskadaba.com. ಉಡುಪಿ ,  ಮಾ 13.  ಕಾಪು ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭಾನುವಾರ ಬೈಕ್ ಮತ್ತು ಆ್ಯಂಬುಲೆನ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ  ಇಂದು ಮೃತ ಪಟ್ಟಿದ್ದಾರೆ.

ಮೃತಪಟ್ಟವರನ್ನು ಉಚ್ಚಿಲ ನಿವಾಸಿ ರಿತೇಶ್ ದೇವಾಡಿಗ(24 )  ಎಂದು ಗುರುತಿಸಲಾಗಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಆಂಬುಲೆನ್ಸ್ ಮತ್ತು ಉಚ್ಚಿಲದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಇನ್ನು ಬೈಕ್‌ ಸವಾರ ರಿತೇಶ್ ದೇವಾಡಿಗ ಗಂಭೀರ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ತಡ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ರಿತೇಶ್ ಇಂದು  ಕೊನೆಯುಸಿರೆಳೆದಿದ್ದಾರೆ.

error: Content is protected !!
Scroll to Top