ಕಲ್ಲಡ್ಕ: ಚೂರಿ‌ ಇರಿತ ಪ್ರಕರಣ ► ಮೂವರು ಪಿಎಫ್ಐ ಕಾರ್ಯಕರ್ತರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.03. ಕಳೆದ ಡಿಸೆಂಬರ್ 26 ರಂದು ಕಲ್ಲಡ್ಕದಲ್ಲಿ ಕೇಶವ ಎಂಬವರಿಗೆ ಚೂರಿ‌ಇರಿದ ಪ್ರಕರಣದ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬುಧವಾರದಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪ್ರಕರಣದಲ್ಲಿ ಭಾಗಿಯಾಗಿದ್ದ ಪಿಎಫ್ಐ ಕಾರ್ಯಕರ್ತರಾದ ಕಲ್ಲಡ್ಕ ನಿವಾಸಿ ಉಮರಬ್ಬ ಎಂಬವರ ಪುತ್ರ ಮಹಮ್ಮದ್ ಇಕ್ಬಾಲ್, ಪಾಣೆಮಂಗಳೂರು ನಿವಾಸಿ ಅಬ್ದುಲ್ ರಜಾಕ್ ಎಂಬವರ ಪುತ್ರ ಮಹಮ್ಮದ್ ಶರೀಫ್ ಹಾಗೂ ಬಂದರ್ ನಿವಾಸಿ ಮಹಮ್ಮದ್ ಇಕ್ಬಾಲ್ ಎಂಬವರ ಪುತ್ರ ನಿಝಾಮ್ ಎಂದು ಗುರುತಿಸಲಾಗಿದೆ.

ಡಿಸೆಂಬರ್ 26 ರಂದು ಕಲ್ಲಡ್ಕ ಪೇಟೆಯಲ್ಲಿ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಆರೋಪಿ ಕೇಶವ ಎಂಬವರ ಮೇಲೆ ಹೆಲ್ಮೆಟ್ ಧರಿಸಿದ್ದ ಇಬ್ಬರು ಚೂರಿ‌ ಇರಿದು ಪರಾರಿಯಾಗಿದ್ದರು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದರು. ಬುಧವಾರದಂದು ಉಳಿದ ಮೂವರನ್ನು ಬಂಧಿಸುವ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ ನಾಲ್ಕಕ್ಕೇರಿದೆ.

Also Read  ಕರಾವಳಿಯ ಜನಪದ ಕ್ರೀಡೆ ಕಂಬಳದ ಮೇಲೆ ಮತ್ತೆ ನಿಷೇಧದ ಆತಂಕ..!

error: Content is protected !!
Scroll to Top