ರಾಜ್ಯದೆಲ್ಲೆಡೆ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ  ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 14. ಬಿಸಿಲಿನಿಂದ ತತ್ತರಿಸಿರುವ ಕರ್ನಾಟಕದ ಹಲವೆಡೆ, ಇಂದಿನಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಪರಿಣಾಮ ಮಳೆ ಆಗಲಿದೆ ಎನ್ನಲಾಗಿದ್ದು, ಮಾರ್ಚ್ 14 ರಿಂದ 18 ರ ವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೆಡೆ, ಮಾರ್ಚ್ 16 ರಿಂದ 18 ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆ ಆಗಲಿದೆ ಎಂದು ತಿಳಿಸಿದೆ.

Also Read  ದ. ಕ ಜೇನು ವ್ಯವಸಾಯಗಾರರ ಸಹಕಾರ ಸಂಘದ ನೂತನ ಆಡಳಿತ ಕಚೇರಿ ಉದ್ಘಾಟನೆ

error: Content is protected !!