ಕೊಳವೆ ಬಾವಿಗೆ ಬಿದ್ದು 5 ವರ್ಷದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಮಾ. 14. ತೆರೆದ ಕೊಳವೆ ಬಾವಿಗೆ ಬಿದ್ದಿದ್ದ 5 ವರ್ಷದ ಬಾಲಕ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯಲ್ಲಿ ನಡೆದಿದೆ.

ಈತ ಜಮೀನೊಂದರಲ್ಲಿ ತೆರೆದಿಟ್ಟ ಕೊಳವೆ ಬಾವಿಗೆ ಬಿದ್ದಿದ್ದು, ಈ ವಿಚಾರ ಅಧಿಕಾರಿಗಳಿಗೆ ತಿಳಿಯುತ್ತಿದ್ದಂತೆಯೇ ಎನ್‌ ಡಿಆರ್‌ ಎಫ್‌ ರಕ್ಷಣಾ ಸಿಬ್ಬಂದಿಗಳು ತಕ್ಷಣ ಕಾರ್ಯಾಚರಣೆಗೆ ಇಳಿದಿದ್ದಾರೆ. ಆ್ಯಂಬುಲೆನ್ಸ್, ಆಕ್ಸಿಜನ್‌, ವೈದ್ಯರು ಎಲ್ಲರೂ ಘಟನಾ ಸ್ಥಳದಲ್ಲಿದ್ದು ಬಾಲಕನ ಚಲನವಲನವನ್ನು ಗಮನಿಸಿ ಆತನಿಗೆ ಕೃತಕ ಆಕ್ಸಿಜನ್‌ ನೆರವನ್ನು ನೀಡಿದ್ದಾರೆ. ಆದರೂ ದುರದೃಷ್ಟವಶಾತ್ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

Also Read  ಸುಳ್ಯ: ವ್ಯಕ್ತಿಯ ಮೇಲೆ ತಂಡದಿಂದ ಹಲ್ಲೆ- ನಗದು ದರೋಡೆ

 

error: Content is protected !!
Scroll to Top