ಪ್ಲಾಸ್ಟಿಕ್ ಡ್ರಮ್ ನಲ್ಲಿ ಮಹಿಳೆಯ ಕೊಳೆತ ಮೃತದೇಹ ಪತ್ತೆ ➤ ಸತತ 3ನೇ ಪ್ರಕರಣ- ಬೆಚ್ಚಿಬಿದ್ದ ಬೆಂಗಳೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 14. ಇಲ್ಲಿನ ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಪ್ಲಾಸ್ಟಿಕ್‌ ಡ್ರಮ್ ​ವೊಂದರಲ್ಲಿ ಮಹಿಳೆಯೋರ್ವರ ಮೃತದೇಹ ಪತ್ತೆಯಾಗಿದ್ದು ನಗರದ ಜನರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ತೀವ್ರ ಶೋಧಕಾರ್ಯ ಮುಂದುವರಿಸಿದ್ದಾರೆ.

ಎರಡು ತಿಂಗಳ ಹಿಂದೆ ಬೆಂಗಳೂರಿನ ಯಶವಂತಪುರ ಹಾಗೂ ಬೈಯ್ಯಪ್ಪನಹಳ್ಳಿ ರೈಲ್ವೇ ನಿಲ್ದಾಣದ ಬಳಿ ಡ್ರಮ್ ಹಾಗೂ ಚೀಲದಲ್ಲಿ ಮಹಿಳೆ ಶವಗಳು ಪತ್ತೆಯಾಗಿತ್ತು, ಇದರ ಬೆನ್ನಲ್ಲೇ ಇದೀಗ ಮತ್ತೊಂದು ಅದೇ ರೀತಿಯ ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಸೋಮವಾರದಂದು ಸಂಜೆ 7 ಗಂಟೆ ಸುಮಾರಿಗೆ ರೈಲ್ವೆ ನಿಲ್ದಾಣದ ಎಂಟ್ರಿ ಗೇಟ್ ಬಳಿಯಿದ್ದ ಪ್ಲಾಸ್ಟಿಕ್ ಡ್ರಮ್ ವಾಸನೆ ಬರುತ್ತಿರುವ ಹಿನ್ನೆಲೆ ಅನುಮಾನಗೊಂಡ ಆಟೋ ಚಾಲಕರೊಬ್ಬರು ಡ್ರಮ್‌ನ ಮುಚ್ಚುಳ ತೆರೆದು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು, ರೈಲ್ವೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Also Read  ಜ. 17: ದ.ಕ ಜಿಲ್ಲಾ ಗೃಹರಕ್ಷಕ ದಳ, ಪೌರ ರಕ್ಷಣಾ ಪಡೆ ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಮತ್ತು ಮಾನವ ಹಕ್ಕುಗಳ ಮಹಾಮೈತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ‘ಪ್ರಸಾದ್ ನೇತ್ರಾಲಯ’ ಇದರ ಸಹಕಾರದೊಂದಿಗೆ ನೇತ್ರ ತಪಾಸಣಾ ಶಿಬಿರ

error: Content is protected !!
Scroll to Top