(ನ್ಯೂಸ್ ಕಡಬ)newskadaba.com ಧಾರವಾಡ, ಮಾ.14. ರಾಷ್ಟೀಯ ಆಹಾರ ಭದ್ರತಾ ಕಾಯ್ದೆ ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ಪಡಿತರ ಫಲಾನುಭವಿಗಳಿಗೆ ಮಾರ್ಚ್-2023ನೇ ಮಾಹೆಯಲ್ಲಿ ಆಹಾರಧಾನ್ಯ ವಿತರಣೆಯನ್ನು ಮಾಡಲಾಗುತ್ತದೆ ಎಂದು ವರದಿಯಾಗಿದೆ.
ಎನ್ಎಫ್ಎಸ್ಎ ಅಡಿ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ 35 ಕೆಜಿ ಅಕ್ಕಿ ಮತ್ತು ಬಿಪಿಎಲ್ ಪಡಿತರ ಚೀಟಿ ಪ್ರತಿ ಸದಸ್ಯರಿಗೆ 6 ಕೆಜಿಯಂತೆ ಅಕ್ಕಿಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ.