ಶಿಕ್ಷಣ ಸಚಿವ ಬಿಸಿ ನಾಗೇಶ್ ರಾಜೀನಾಮೆಗೆ AIYF ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಸರಕಾರದ ಅವೈಜ್ಞಾನಿಕ ಶಿಕ್ಷಣ ನೀತಿ ಮತ್ತು ನ್ಯಾಯಾಲಯದ ತೀರ್ಪನ್ನು ಪಾಲಿಸದೇ 5 ಹಾಗೂ 8ನೇ ತರಗತಿಗಳ ಪಬ್ಲಿಕ್ ಪರೀಕ್ಷೆಗಳ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಗೊಂದಲವನ್ನುಂಟು ಮಾಡುತ್ತಿರುವ ಶಿಕ್ಷಣ ಸಚಿವ ನಾಗೇಶ್ ರಾಜೀನಾಮೆಗೆ ಎಐವೈಎಫ್ ಆಗ್ರಹಿಸಿದೆ.

ರಾಜ್ಯದ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು 2022ರಂದು ಹೊರಡಿಸಿದ್ದ ಆದೇಶವು ನಿಯಮ ಬಾಹಿರವೆಂದು ತಿಳಿಸಿದ್ದ ರಾಜ್ಯ ಹೈಕೋರ್ಟ್ ಇದನ್ನು ರದ್ದುಗೊಳಿಸುವಂತೆ ಆದೇಶಿತ್ತು. ಈ ಆದೇಶದ ವಿರುದ್ಧ ಸರಕಾರವು ಮತ್ತೆ ನ್ಯಾಯಾಲಯದ ಮೆಟ್ಟಲೇರಿತ್ತು. ಆದಾಗ್ಯೂ ಹೈಕೋರ್ಟ್ ಈ ಮೇಲ್ಮನವಿಯನ್ನು ತಿರಸ್ಕರಿಸಿದೆ. ಹಾಗಾಗಿ ಶಿಕ್ಷಣ ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಸುತ್ತಿರುವ ಸಚಿವ ನಾಗೇಶ್ ರಾಜೀನಾಮೆ ಸಲ್ಲಿಸಬೇಕು ಎಂದು ಅಖಿಲ ಭಾರತ ಯುವಜನ ಫೆಡರೇಶನ್ (ಎಐವೈಎಫ್)ನ ದ.ಕ.ಜಿಲ್ಲಾ ಸಮಿತಿಯ ಅಧ್ಯಕ್ಷ ಪುಷ್ಪರಾಜ್ ಬೋಳೂರು ಮತ್ತು ಕಾರ್ಯದರ್ಶಿ ಜಗತ್‌ಪಾಲ್ ಕೋಡಿಕಲ್ ಆಗ್ರಹಿಸಿದ್ದಾರೆ.

Also Read  ಸರ್ಕಾರ ಸುಭದ್ರವಾಗಿದೆ, ಮುಂದಿನ ಮೂರು ವರ್ಷವೂ ಯಡಿಯೂರಪ್ಪನವರೇ ಸಿಎಂ ➤ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್

error: Content is protected !!
Scroll to Top