ಬೀದಿ ನಾಯಿಗಳ ದಾಳಿಗೆ ಐದರ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಹೈದರಾಬಾದ್, ಮಾ. 14. ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಬಾಲಕನೋರ್ವ ಮೃತಪಟ್ಟ ಘಟನೆ ತೆಲಂಗಾಣದಲ್ಲಿ ವರದಿಯಾಗಿದೆ.

ಮೃತ ಬಾಲಕನನ್ನು ಬಾನೋತ್ ಭಾರತ್ (5) ದು ಗುರುತಿಸಲಾಗಿದೆ. ಈತ ಮನೆಯ ಪಕ್ಕದಲ್ಲಿರುವ ರಸ್ತೆಯಲ್ಲಿ ಆಟವಾಡುತ್ತಿದ್ದ ವೇಳೆ ಏಕಾಏಕಿ ಬೀದಿ ನಾಯಿಗಳು ಆತನ ಮೇಲೆ ದಾಳಿ ನಡೆಸಿವೆ. ಪರಿಣಾಮ ಗಂಭೀರ ಗಾಯಗೊಂಡ ಬಾಲಕನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

Scroll to Top