ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ವರ್ಷದ ಮೊದಲ ವರ್ಷಧಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಕೊಡಗು ಜಿಲ್ಲೆಯ ನಾಪೋಕ್ಲು ಭಾಗದಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಹಾಗೆಯೇ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಹಾಗೂ ಕಳಸ ಭಾಗದಲ್ಲಿ ಗುಡುಗು ಸಹಿತ ಹನಿ ಮಳೆಯಾಗಿದೆ.

ಬಿಸಿಲಿನ ಧಗೆ ಹೆಚ್ಚುತ್ತಿರುವಂತೆಯೇ ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಸಮುದ್ರದ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ನಾನಾ ಕಡೆ ಮಂಗಳವಾರದಿಂದ 5 ದಿನ ಹಗುರ ಮಳೆಯಾಗಲಿದೆ ಎಂದು ತಿಳಿಸಿದೆ. ಮಾ.14 ರಿಂದ 18ರ ವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ.

Also Read  ಗ್ರಾಪಂ ಚುನಾವಣೆ ➤ ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಸಚಿವ ಕೋಟ ಶ್ರೀನಿವಾಸ್ ಪೂಜಾರಿ

error: Content is protected !!
Scroll to Top